ತೀರ್ಥಹಳ್ಳಿ: ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾಲಯ ಕ್ಯಾಂಪಸ್ ಇಂದೋರ್ ಹಾಲ್ನಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಅಸ್ಮಿತ ಖೇಲೊ ಇಂಡಿಯಾ ವುಮೆನ್ಸ್ ಲೀಗ್ನ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಎಂ ಜೆ ಸ್ಕೂಲ್ ಆಫ್ ಮಾರ್ಷಲ್ ಆರ್ಟ್ಸ್ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾನ್ವಿ ಜೋಯಿಸ್ ಚಿನ್ನದ ಪದಕ ದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾಳೆ.
ಈಕೆ ತೀರ್ಥಹಳ್ಳಿ ನಿವಾಸಿಗಳಾದ ಅರ್ಚನಾ ಜೋಯಿಸ್ ಮತ್ತು ಮಹಾಬಲ ಜೋಯಿಸ್ ರವರ ಪುತ್ರಿ ಹಾಗೂ ಪ್ರಸ್ತುತ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿರುತ್ತಾಳೆ.
ಈ ಸಾಧನೆಯನ್ನು ಶಿವಮೊಗ್ಗ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಚಂದನ್ ಪಾಟೀಲ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಕಾಂತ್ ಜಿ ಭಟ್ ಮತ್ತು ಸದಸ್ಯರು ಅಭಿನಂದಿಸಿದ್ದಾರೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.