Chikmagaluru News

ಮಂಗನ ಕಾಯಿಲೆ ; ಕಾಫಿನಾಡಿನಲ್ಲಿ ಮೊದಲ ಬಲಿ !

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ.

ತಾಯಿ ಮತ್ತು ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ‌ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ.

ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಈ ವರ್ಷ ಮೊದಲ ಬಲಿ ಪಡೆದುಕೊಂಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>