ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ತೀರ್ಥಹಳ್ಳಿಯ ಮೂಲದವರಾಗಿದ್ದು ಇವರ ತಂದೆ ವಲೇರಿಯನ್ ಡೊಮೆಲ್ಲೋ ಯಹೊಜಿನ್ ಡೊಮೆಲ್ಲೋರವರ ಎರಡನೇ ಪುತ್ರರಾಗಿದ್ದು ತೀರ್ಥಹಳ್ಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಮೃತರು ತಂದೆ, ತಾಯಿ, ಅತ್ತಿಗೆ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಪವಿತ್ರ ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆದವು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.