THIRTHAHALLI ; ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ.
14 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 2 ತೃತೀಯ ಸ್ಥಾನ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ 4 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ, 3 ತೃತೀಯ ಸ್ಥಾನ ಪಡೆದಿದ್ದಾರೆ.

17 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 5 ತೃತೀಯ ಸ್ಥಾನ. ಬಾಲಕಿಯರ ವಿಭಾಗದಲ್ಲಿ 1 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 2 ತೃತೀಯ ಸ್ಥಾನ ಪಡೆದಿದ್ದಾರೆ. ವಾಲಿಬಾಲ್ ನಲ್ಲಿ 17 ಮತ್ತು 14 ವರ್ಷ ವಯೋಮಿತಿಯ ಬಾಲಕರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಕೆ.ಎಸ್.ವಾಸುದೇವ, ಆಡಳಿತ ಮಂಡಳಿ ಅಭಿನಂದಿಸಿದೆ. ಈ ಸಂದರ್ಭದಲ್ಲಿ ಶಿಕ್ಷಕ ಎಚ್.ವಿ.ಮುರಳೀಧರ, ದೈಹಿಕ ಶಿಕ್ಷಕರಾದ ಎಚ್.ಬಿ.ರಜಿತ್ ಕುಮಾರ್, ದರ್ಶನ್ ಇದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.