Hosanagara

ರಾಮಚಂದ್ರಪುರ ಮಠದ ಗೋವರ್ಧನ ಗಿರಿಧಾರಿಯಲ್ಲಿ ಫೆ. 25 ರಂದು ಕೃಷ್ಣಾರ್ಪಣಮ್

ಹೊಸನಗರ ; ತಾಲ್ಲೂಕಿನ ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದಲ್ಲಿರುವ ಗೋವರ್ಧನ ಗಿರಿಧಾರಿ ದೇವರ ಸನ್ನಿಧಿಯಲ್ಲಿ ಫೆ. 25 ರಂದು ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವರ್ಧಂತಿ, ಗೋದೀಪ ಮಹೋತ್ಸವ, ವಿಷ್ಣು ಸಹಸ್ರನಾಮ ಪಠಣ, ಛತ್ರ ಸಮರ್ಪಣೆ, ಪಾಂಚಜನ್ಯ ಸೇವೆ ,
ಲೇಖನ ಯಜ್ಞ ಸಮರ್ಪಣೆ ಸೇರಿದಂತೆ ಲೋಕದ ಯೋಗಕ್ಷೇಮದ ವಿಶೇಷ ಪ್ರಾರ್ಥನೆಯೊಂದಿಗೆ ಗೋಲೋಕ ವರ್ಷ ಸಂಭ್ರಮದ ಕೃಷ್ಣಾರ್ಪಣಮ್ ಕಾರ್ಯಕ್ರಮ ನಡೆಯಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ
ಗೋಸಂರಕ್ಷಣಾ ಸಂಕಲ್ಪಕ್ಕೆ ಮೂಲಸ್ಥಾನವಾದ ಗೋವರ್ಧನ ಗಿರಿಧಾರಿ ದೇವಸ್ಥಾನದಲ್ಲಿ ಕಳೆದ ಹಲವು ವರ್ಷಗಳಿಂದ ಈ ವಿಶಿಷ್ಠ
ಕಾರ್ಯಕ್ರಮಗಳು ವರ್ಷವೂ ನಡೆಯುತ್ತ ಬಂದಿದೆ.

ಈ ಬಾರಿ ಫೆ. 25 ರ ಸಂಜೆ ನಡೆಯುವ ಗೋದೀಪ ಮಹೋತ್ಸವ ಬಲು ವಿಶಿಷ್ಟತೆಯನ್ನು ಒಳಗೊಂಡಿದೆ. ಬುಧವಾರದಿಂದಲೇ ಭಾಗವತ ಸಪ್ತಾಹ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿದೆ.

ಫೆ. 24 ರವರೆಗೆ 7 ದಿನಗಳ ಕಾಲ ನಿತ್ಯ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭಾಗವು ಸಪ್ತಾಹ ಜರುಗಲಿದೆ. ಫೆ. 24 ರಂದು ಗೋಸಂಪದಾಭಿವೃದ್ದಿ, ಕ್ಷೇತ್ರಪುಷ್ಠಿ ಮತ್ತು ಲೋಕಕಲ್ಯಾಣಾರ್ಥವಾಗಿ ವಿವಿಧ ಧಾರ್ಮಿಕ ಕಾರ‍್ಯಕ್ರಮ ನಡೆಯಲಿದೆ. ಫೆ. 24 ರ ಸಂಜೆ ಕ್ಷೇತ್ರಕ್ಕೆ ಸ್ವಾಮೀಜಿ ಆಗಮನವಾಗಲಿದೆ.

ಫೆ. 25 ರಂದು ಬೆಳಗ್ಗೆ ಶ್ರೀಪೂಜೆ, ಪಾದುಕ ಪೂಜೆ ಮತ್ತು 7 ಗಂಟೆಗೆ ಸೋಪಾನಪೂಜೆ ಹಾಗೂ ಪ್ರತಿಷ್ಠಾ ವರ್ಧಂತಿ ನಡೆಯಲಿದೆ. ನಂತರ ವಿಷ್ಣು ಸಹಸ್ರನಾಮ ಪಾರಾಯಣ, ಛತ್ರ, ಪಾಂಚಜನ್ಯ ಸಮರ್ಪಣೆ, ಗೋವುಗಳಿಗೆ ಗೋಗ್ರಾಸ ಸಮರ್ಪಣೆ ಮತ್ತಿತರ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಸಂಜೆ ಗೋದತ್ತು ದಾನಿಗಳೊಂದಿಗೆ ಸಂವಾದ, ಗೌರವ ಸಮ್ಮಾನ, ಗೋಪೂಜೆ, 1008 ಮಾತೆಯರಿಂದ ಗೋನೀರಾಜನ ಹಾಗೂ ಶ್ರೀಗಳವರಿಂದ ಗೋಸಂದೇಶ ಇರಲಿದೆ ಎಂದು ಸಮಿತಿ ಪ್ರಕಟಣೆಯಲ್ಲಿ
ತಿಳಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>