ಶಿವಮೊಗ್ಗ ಸುದ್ದಿ

ಬಿಜೆಪಿ ರಿಪೇರಿ ಆಗುತ್ತೆ, ಆದರೆ ಸ್ವಲ್ಪ ಸಮಯ ಬೇಕು:ನಾನೇನು ರಾಜಕೀಯ ಸನ್ಯಾಸಿಯಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಬಿಜೆಪಿ ಸಂಘಟನೆ ಇವತ್ತಲ್ಲ ನಾಳೆ ಖಂಡಿತ ಸರಿಯಾಗುತ್ತದೆ, ಆದರೆ ಅದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ತಾವು ರಾಜಕೀಯ ಸನ್ಯಾಸಿಯಲ್ಲ ಎಂದ ಅವರು, ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದರು

ಬಿಜೆಪಿ ರಿಪೇರಿ ಆಗುತ್ತೆ, ಆದರೆ ಸ್ವಲ್ಪ ಸಮಯ ಬೇಕು:ನಾನೇನು ರಾಜಕೀಯ ಸನ್ಯಾಸಿಯಲ್ಲ: ಕೆ.ಎಸ್. ಈಶ್ವರಪ್ಪ – mt eshawarappa

ಶಿವಮೊಗ್ಗ: ಬಿಜೆಪಿ ತನ್ನ ಮೂಲ ಸಿದ್ಧಾಂತದಿಂದ ದೂರ ಸರಿದಿದೆ ಎಂಬ ಚರ್ಚೆಗಳು ಪಕ್ಷದೊಳಗೂ ಹೊರಗೂ ನಡೆಯುತ್ತಿವೆ. ಸಂಘಟನೆಯನ್ನು ಸರಿಪಡಿಸುವ ಅಗತ್ಯವಿದೆ, ಅಧಿಕಾರದ ಆಸೆ ಸಹಜವಾದರೂ ಸಿದ್ಧಾಂತವನ್ನು ಮರೆಯಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಘಟನೆಗೆ ಮತ್ತೆ ಬರಬೇಕು ಎಂದು ನಿತ್ಯ ನೂರಾರು ಮಂದಿ ಕರೆ ಮಾಡುತ್ತಿದ್ದಾರೆ. ಸಾವಿರಾರು ಕಾರ್ಯಕರ್ತರ ತಪಸ್ಸು, ಪರಿಶ್ರಮ ಮತ್ತು ನಿಷ್ಠೆಯಿಂದ ಬೆಳೆದಿರುವ ಪಕ್ಷ ಇವತ್ತಲ್ಲ ನಾಳೆ ಖಂಡಿತ ಸರಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.

“ಬಿಜೆಪಿ ರಿಪೇರಿ ಆಗುತ್ತೆ. ಆದರೆ ಅದು ಯಾವಾಗ ಆಗುತ್ತದೆ ಎಂದು ನಾನು ದಿನಾಂಕ ಹೇಳುವುದಿಲ್ಲ. ಅದಕ್ಕೆ ಸ್ವಲ್ಪ ಸಮಯ ಬೇಕು” ಎಂದು ಈಶ್ವರಪ್ಪ ಹೇಳಿದರು.

ರಾಜಕಾರಣದಲ್ಲಿ ಸಂಪೂರ್ಣವಾಗಿ ಅಧಿಕಾರದಿಂದ ದೂರ ಉಳಿಯುವುದು ಸಾಧ್ಯವಿಲ್ಲ. ನಾನು ರಾಜಕೀಯ ಸನ್ಯಾಸಿಯಲ್ಲ. ಅವಕಾಶ ಸಿಕ್ಕರೆ ಅಧಿಕಾರವನ್ನು ಯಾರೂ ಬಿಡುವುದಿಲ್ಲ. ಅಧಿಕಾರ ಸಿಕ್ಕಾಗ ಅದನ್ನು ಜನಸೇವೆಗಾಗಿ ಬಳಸಿಕೊಳ್ಳುವುದೇ ನಿಜವಾದ ರಾಜಕಾರಣ ಎಂದು ಅವರು ಅಭಿಪ್ರಾಯಪಟ್ಟರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹಿರಿಯ ನಾಯಕರೊಂದಿಗೆ ನಡೆದಿರುವ ಚರ್ಚೆಗಳ ಬಗ್ಗೆ ಈಗಲೇ ಬಹಿರಂಗವಾಗಿ ಹೇಳುವುದಿಲ್ಲ. ಬರುವ ದಿನಗಳಲ್ಲಿ ಎಲ್ಲವೂ ಪ್ರಾಯೋಗಿಕವಾಗಿ ಜನರಿಗೆ ಗೊತ್ತಾಗಲಿದೆ ಎಂದು ಈಶ್ವರಪ್ಪ ಹೇಳಿದರು.

ಬಿಜೆಪಿ ಕಾರ್ಯಕರ್ತರ ಮನಸ್ಸಿನಲ್ಲಿ ಇನ್ನೂ ಪಕ್ಷದ ಬಗ್ಗೆ ಪ್ರೀತಿ ಇದೆ. ಆದರೆ ಸಂಘಟನೆ ಸಿದ್ಧಾಂತದ ದಾರಿಯಲ್ಲಿ ನಡೆಯಬೇಕೆಂಬ ನಿರೀಕ್ಷೆಯೂ ಇದೆ. ಅಧಿಕಾರಕ್ಕಾಗಿ ಮಾತ್ರ ರಾಜಕಾರಣ ನಡೆಯಬಾರದು; ಪಕ್ಷದ ಮೂಲ ಮೌಲ್ಯಗಳು ಉಳಿಯಬೇಕು ಎಂದು ಅವರು ಹೇಳಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650