KSRTC ನೌಕರರ ಮುಷ್ಕರ | ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಎನ್.ರಮೇಶ್

0
423

ಚಿಕ್ಕಮಗಳೂರು: ರಾಜ್ಯದ್ಯಾಂತ ಕೆ.ಎಸ್.ಆರ್.ಟಿ.ಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ತಮ್ಮ ಕಛೇರಿಯಲ್ಲಿ ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ ಕುರಿತ ತುರ್ತು ಸಭೆಯ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾರ್ಯಚರಣೆ ನಡೆಸುತ್ತಿರುವ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಅನಾನೂಕೂಲವಾಗಬಾರದೆಂಬ ದೃಷ್ಠಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಿಂದ ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್‌ಗಳು ಕಾರ್ಯಚರಣೆ ಮಾಡಲು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಜಿಲ್ಲೆಯ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ಸುಗಳು ಸಂಚಾರ ಪ್ರಾರಂಭಿಸಲು ಸೂಕ್ತವಾದ ಕ್ರಮ ಕೈಗೊಳ್ಳಲಾಗಿದ್ದು, ಖಾಸಗಿ ಬಸ್‌ಗಳು ಹಾಗೂ ಮ್ಯಾಕ್ಸಿ ಕ್ಯಾಬ್‌ನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಗದಿಪಡಿಸಿರುವ ದರದಲ್ಲಿಯೆ ಪ್ರಯಾಣಿಕರನ್ನು ಕರೆದೊಯ್ಯಲು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಲಾಗಿದ್ದು, ಪ್ರಯಾಣಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಖಾಸಗಿ ಬಸ್ ಮಾಲೀಕರಿಗೆ ಸೂಚಿಸಿದರು.

ಪ್ರಯಾಣಿಕರ ಭದ್ರತಾ ದೃಷ್ಠಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್.ಎಂ.ಹೆಚ್ ತಿಳಿಸಿದರು.

ಪ್ರಯಾಣಿಕರು ಯಾವುದೇ ದೂರುಗಳಿದ್ದಲ್ಲಿ ಕೆ.ಎಸ್.ಆರ್.ಟಿ.ಸಿ ದೂ.ಸಂ:7760990407, 0826222986 ಹಾಗೂ ಪೊಲೀಸ್ ಠಾಣೆ ದೂ.ಸಂ: 9480805100, 0826222230540 ಅನ್ನು ಸಂಪರ್ಕಿಸುವಂತೆ ತಿಳಿಸಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳ್ಕರ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಕ ವಿರೇಶ್, ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಮ್ಯಾಕ್ಸಿ ಕ್ಯಾಬ್ ಅಸೋಶಿಯೆಷನ್‌ನ ಪ್ರತಿನಿಧಿ ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here