CHIKKAMAGALURU | ವೃದ್ಧೆಯೊಬ್ಬರ ಮೇಲೆ ಸಾರಿಗೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) ಬಸ್ ಹರಿದು ಸಾವನ್ನಪ್ಪಿರುವ ವೃದ್ಧೆ. ಕೊಪ್ಪದಿಂದ ಚಿಕ್ಕಮಗಳೂರಿನ ಬಸ್ ನಿಲ್ಲಾಣ ಪ್ರವೇಶಿಸು ಸಮಯದಲ್ಲಿ ಪುಟ್ಟಮ್ಮ ಬಸ್ ಅನ್ನು ಗಮನಿಸದೆ ನಿಲ್ಲಾಣದ ಇನ್ನೊಂದು ಭಾಗಕ್ಕೆ ತೆರಳುತ್ತಿರುವಾಗ ಬಸ್ಸಿನ ಎಡಭಾಗ ತಗುಲಿ ಬಿದ್ದ ಕಾರಣ ಮುಂಭಾಗದ ಚಕ್ರ ವೃದ್ಧೆಯ ಹೊಟ್ಟೆಯ ಮೇಲೆ ಹರಿದ ಪರಿಣಾಮ ಹೊಟ್ಟೆಯಿಂದ ಕರುಳು ಹೊರಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಕೂಡಲೇ ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.

ಚಿಕಿತ್ಸೆ ಪಡೆಯಲು ಪುಟ್ಟಮ್ಮ ಚಿಕ್ಕಮಗಳೂರಿನ ಆಸ್ಪತ್ರೆಗೆ ಬಂದಿದ್ದರು. ವಾಪಾಸ್ ಗ್ರಾಮಕ್ಕೆ ತೆರಳಲು ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಈ ಒಂದು ದುರಂತ ಸಂಭವಿಸಿದೆ.
ಘಟನೆ ಕುರಿತಂತೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.