ಸಾಗರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಆಕ್ಸೆಲ್ ಬ್ಲೇಡ್ ತುಂಡಾಗಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 69ರ ಬಾಪಟ್ ಕಲ್ಯಾಣ ಮಂದಿರದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್ಸಿನ ಆಕ್ಸೆಲ್ ಬ್ಲೇಡ್ ಕಟ್ ಆದ ಕಾರಣ ಚಕ್ರ ಕಳಚಿಕೊಂಡಿದೆ. ಪರಿಣಾಮವಾಗಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಬಸ್ ಜಖಂಗೊಂಡಿದ್ದು, ಚಾಲಕ, ನಿರ್ವಾಹಕ ಸೇರಿದಂತೆ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸಾಗರದ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

