ಶಿವಮೊಗ್ಗ

ಗೀತಾ, ಮಧು ವಿರುದ್ಧ ಫೇಸ್‌ಬುಕ್‌ನಲ್ಲಿ ಸುಧೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ ಕುಮಾರ್ !

SHIVAMOGGA | ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ (B.Y. Raghavendra) ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ (Kumar Bangarappa) ಕಾಂಗ್ರೆಸ್‌ ಅಭ್ಯರ್ಥಿ, ಸಹೋದರಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar), ನಟ ಶಿವರಾಜ್‌ಕುಮಾರ್‌ (Dr. Shivarajkumar), ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಫೇಸ್‌ಬುಕ್‌ನಲ್ಲಿ (Facebook) ಸುದೀರ್ಘ‌ ಪೋಸ್ಟ್‌ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪೋಸ್ಟ್‌ನಲ್ಲೇನಿದೆ ?

‘ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ
ಆಶಾಕಿರಣವಾಗಿದ್ದ, ರೈತಬಂದುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯು ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮಭಾವ, ಸಮಚಿತ್ತದಿಂದ ಬೆರೆತಿದ್ದವರು ಇವರ ಆಡಳಿತ ವ್ಯೆಖರಿಯು ಅನುಕರಣೀಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು.

ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ,ಆಶ್ರಯ, ಅಕ್ಷಯ ಮುಂತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥ ಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ.

ಮೇಲಾಗಿ, ಕನ್ನಡದ ಕಣ್ಮಣಿ ಡಾ.ರಾಜ್‍ಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ. ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ.

ಉತ್ತಮ ಉದ್ದೇಶ ಇವರದ್ದಾಗಿದ್ದರೆ
ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ. ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು. ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ ಸಿಎಂ ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜ್‌ಕುಮಾರ್
ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು.

ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೊಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು’ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Read More

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]