Bangalore

ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್‌ ಅಭಿಮಾನಿಗಳ ಮುತ್ತಿಗೆ!

Kumar bangarappa
Kumar bangarappa

Kumar Bangarappa:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್‌ ಅಭಿಮಾನಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ ಬಂಗಾರಪ್ಪ ಹಗುರಾದ ಮಾತುಗಳು ನೋವು ತಂದಿದ್ದು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಕ್ಷಣ ಕುಮಾರ ಬಂಗಾರಪ್ಪ ಅವರ ಮನೆಗೆ ಸಿಆರ್‌ಪಿಎಫ್ ಪಡೆಗಳು ಆಗಮಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಮನೆ ಬಾಗಿಲಿನಿಂದ ಹೊರಹೋಗುವಂತೆ ವಾರ್ನಿಂಗ್ ಮಾಡಿದರು.

ಗೀತಾ ಶಿವರಾಜಕುಮಾರ್ ಸೋಲಿನ ನಂತರ, ನಟ ಶಿವರಾಜಕುಮಾರ್ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸಕ್ಕೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಚುನಾವಣೆ ನಡೆದಿದೆ. ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ, ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಮತ್ತು ಬಂಡಾಯ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದರು.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More

ಗೀತಾ, ಮಧು ವಿರುದ್ಧ ಫೇಸ್‌ಬುಕ್‌ನಲ್ಲಿ ಸುಧೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ ಕುಮಾರ್ !

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650