ಹೊಸನಗರ ; ಇತಿಹಾಸ ಪ್ರಸಿದ್ಧ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ರಾಜ್ಯ ಕೆಜಿಐಡಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಕುಮಾರ್ ಮಂಡಾನಿ ಅವರು ತಮ್ಮ ತಂದೆ ದಿ. ಶೇಷನಾಯ್ಕರ ಸವಿನೆನಪಿಗಾಗಿ 50 ಸಾವಿರ ರೂ. ದೇಣಿಗೆ ಹಣವನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರಿಗೆ ಹಸ್ತಾಂತರಿಸಿದರು.
ಈ ವೇಳೆ ಸಮಿತಿ ಸದಸ್ಯರಾದ ಸದಸ್ಯರಾದ ಹರತಾಳು ರಾಮಚಂದ್ರ,ಸುಧೀರ್ ಭಟ್, ಕೋಡೂರು ವಿಜೇಂದ್ರರಾವ್, ಅರ್ಚಕ ಭಾಸ್ಕರ್ ಜೋಯಿಸ್, ವಕೀಲ ಗುರುಮೂರ್ತಿ ಮಂಡಾನಿ ಇದ್ದರು.
ಹೊಸನಗರ ಹೋಲಿ ರಿಡೀಮರ್ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ
ಹೊಸನಗರ ; ಇಲ್ಲಿನ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಒಂದಾಗಿರುವ ಹೋಲಿ ರಿಡೀಮರ್ ಪ್ರೌಢ ಶಾಲೆಗೆ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಬಂದಿದೆ.

ಈ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.

ಪರೀಕ್ಷೆ ಬರೆದ 51 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದು ಶಾಲೆಗೆ ಕೀರ್ತಿ ತರಲು ಸಹಕರಿಸಿದ ಶಾಲೆಯ ಉಪನ್ಯಾಸಕರ ವೃಂದಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕಿಯಾದ ವಿಲ್ಮಾಪಿಂಟೋ ಅಭಿನಂದಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.