ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಸುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ.
ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ:
- ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲು ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲಲಿದೆ.
- ರೈಲು ಸಂಖ್ಯೆ 16205/16206 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲುಗಳು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತವೆ.
ಈ ನಿಲುಗಡೆಗಳು 24 ಆಗಸ್ಟ್ 2025 ರಿಂದ ಪ್ರಾರಂಭವಾಗಿ 23 ಫೆಬ್ರವರಿ 2026 ರವರೆಗೆ, ಅಂದರೆ ಸುಮಾರು ಆರು ತಿಂಗಳ ಕಾಲ ಮುಂದುವರಿಯಲಿವೆ. ಸಮಯದಲ್ಲಿ ಯಾವುದೇ ಬದಲಾವಣೆ ಆಗದೇ, ಈಗಿರುವ ವೇಳಾಪಟ್ಟಿಯಲ್ಲೇ ನಿಲುಗಡೆ ಜಾರಿಯಲ್ಲಿರುತ್ತದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಹೊಸನಗರ , ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರಯಾಣಿಕರಿಗೆ ಇದು ದೊಡ್ಡ ಅನುಕೂಲವಾಗಲಿದ್ದು, ಸ್ಥಳೀಯರ ಬಹುಕಾಲದ ಬೇಡಿಕೆ ರೈಲ್ವೆ ಇಲಾಖೆಯಿಂದ ಮನ್ನಣೆ ಪಡೆದಂತಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.