Thirthahalli | ಸಿಡಿಲು (Thunderbolt) ಬಡಿದು ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ (Labour) ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ಆಗುಂಬೆ (Agumbe) ಬಳಿ ನಡೆದಿದೆ.
ಮೃತನನ್ನು ಬಿದರಗೋಡು ಗ್ರಾಮದ ನಾಗೇಂದ್ರ ಎಂ.ಎಸ್. (45) ಎಂದು ಗುರುತಿಲಾಗಿದೆ.

ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಎಂಬುವರ ಸ.ನಂ. 186 ರಲ್ಲಿನ ಅಡಿಕೆ ತೋಟದಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿರುವುದಾಗಿ ತಿಳಿದುಬಂದಿದೆ.
ಮೃತರು ಪತ್ನಿ ಸರಿತಾ ಹಾಗೂ 10 ಮತ್ತು 6 ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More
ನೈಋತ್ಯ ಶಿಕ್ಷಕರ ಚುನಾವಣೆ | ಮೊದಲ ಪ್ರಾಶಸ್ತ್ಯದ ಮತದಲ್ಲೇ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.