ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆಯ ಲೇಡಿ ಇನ್ಸ್‌ಪೆಕ್ಟರ್ ನಾಗಮ್ಮ ಬಂಧಿಸಿದ ಘಟನೆ ಇಂದು ನಡೆದಿದೆ.
ಕೊಲೆ ಯತ್ನ ಪ್ರಕರಣದಲ್ಲಿ ರೌಡಿಶೀಟರ್ ಕಡೇಕಲ್ ಅಬೀದ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು, ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭದಲ್ಲಿ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿದ್ದಾನೆ.
ಈ ವೇಳೆ ಇನ್ಸ್‌ಪೆಕ್ಟರ್ ನಾಗಮ್ಮ, ಕಡೇಕಲ್ ಅಬೀದ್‌ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಅರುಣ್ ಕುಮಾರ್ ಮತ್ತು ಕಡೇಕಲ್ ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 20ಕ್ಕೂ ಅಧಿಕ ಪ್ರಕರಣಗಳು ಈತನ ಮೇಲಿವೆ ಎಂದು ತಿಳಿದುಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.