ಸೊರಬ ; ಉರಿ ಬಿಸಿಲಿನಲ್ಲೂ ಗಮನಸೆಳೆದ ಕೆರೆಬೇಟೆ

Written by malnadtimes.com

Published on:

ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ಕೂಡ ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ಬಳಿಕ ಬೇಸಿಗೆಯಲ್ಲಿ ಕೆರೆಗಳು ಬತ್ತಿದಾಗ ಕೆರೆಬೇಟೆ ಸಾರಲಾಗುತ್ತದೆ. ಈ ವೇಳೆ ಗ್ರಾಮಸ್ಥರಲ್ಲಿ ಎಲ್ಲಿಲ್ಲದ ಸಡಗರ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/16SeNT5dC2/

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಓಟೂರು ಗ್ರಾಮದ ವಡ್ಡಿನಕೆರೆಯಲ್ಲಿ ಮಂಗಳವಾರ ಮೀನು ಶಿಕಾರಿ ಭರ್ಜರಿಯಾಗಿ ಜರುಗಿತು. ಕೆರೆಬೇಟೆಯಲ್ಲಿ ಕೂಣಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಗ್ರಾಮಸ್ಥರು ಮಾತ್ರವಲ್ಲದೇ ಸುತ್ತಲಿನ ಗ್ರಾಮದವರು ಜಾತಿ, ಮತಗಳ ಭೇದವಿಲ್ಲದೆ, ಹಿರಿಯರು, ಕಿರಿಯರೆನ್ನದೇ ಕೆರೆಬೇಟೆಯಲ್ಲಿ ಪಾಲ್ಗೊಂಡಿದ್ದರು.

ಕೆಲವರಿಗೆ ಸುಮಾರು 5 ಕೆ.ಜಿ.ವರೆಗೆ ಮೀನು ಲಭಿಸಿದರೆ, ಕೆಲವರು ಚಿಕ್ಕ ಮೀನುಗಳನ್ನು ಹಿಡಿದು ತೃಪ್ತಿಪಟ್ಟುಕೊಂಡರು.

ವಿಶೇಷವೆಂದರೆ, ಬಿದರಿನ ಕೂಣಿಯ ಜಾಗದಲ್ಲಿ ಕಬ್ಬಿಣದ ಕೂಣಿಗಳು ಸಹ ಬಳಸಲಾಯಿತು. ಗ್ರಾಮ ಸಮಿತಿಯವರು ಯಾವುದೇ ಗಲಾಟೆ ಮತ್ತು ಗೊಂದಲಗಳಿಗೆ ಅವಕಾಶ ನೀಡದಂತೆ ಅಚ್ಚುಕಟ್ಟಾಗಿ ನಿರ್ವಹಿಸಿದರು.

Leave a Comment