ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Written by Koushik G K

Updated on:

ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು ಬಯಸುವ, ಯಾವುದೇ ಸಮಾಜದ ವಿರುದ್ಧವಲ್ಲದ ಶಾಂತಿಯುತ ಸಮಾಜವಾಗಿದೆ” ಎಂಬ ಭಾವನೆಯನ್ನು ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Group Join Now

ಸಿಗಂದೂರು ಹೇಳಿಕೆ : ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ, ಹಿರಿಯರ ಗೌರವ ಮತ್ತು ಜನಪ್ರತಿನಿಧಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಇತ್ತೀಚೆಗೆ ದಾವಣಗೆರೆಯಲ್ಲಿ ಪಂಚ ಪೀಠಾಧಿಪತಿಗಳ ನೇತೃತ್ವದಲ್ಲಿ ಎರಡು ದಿನಗಳ ಅವಧಿಯಲ್ಲಿ ನಡೆದ ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳು ನಮ್ಮ ಸಮಾಜದ ಶಕ್ತಿ, ಒಗ್ಗಟ್ಟು ಮತ್ತು ನಾಯಕತ್ವವನ್ನು ಇಡೀ ದೇಶಕ್ಕೆ ತೋರಿಸಿವೆ” ಎಂದು ಸಚಿವೆ ಹೆಬ್ಬಾಳಕರ್ ಹೇಳಿದರು.

ಸಮಾಜ ಸೇವೆಗೆ ಬದ್ಧತೆ

“ನಾನು ಯಾವತ್ತೂ ನನ್ನ ಸಮಾಜದ ಜೊತೆಗೆ ಇದ್ದೇನೆ. ಗುರುಗಳು ನೀಡುವ ಮಾರ್ಗದರ್ಶನದಲ್ಲಿ ನಡೆದುಕೊಂಡು ಸಮಾಜದ ಹಿತಕ್ಕಾಗಿ ಎಲ್ಲ ರೀತಿಯ ಸೇವೆ ಮಾಡುವ ಸಂಕಲ್ಪವಿದೆ. ನಾವೆಲ್ಲರೂ ಒಂದು ಎಂಬ ತತ್ವದಲ್ಲಿ ನಂಬಿಕೆ ಇಟ್ಟುಕೊಂಡು, ಸಮಾಜದ ಒಗ್ಗಟ್ಟು ಮತ್ತು ಪ್ರಗತಿಗೆ ಶ್ರಮಿಸುತ್ತೇವೆ” ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಪ್ರತಿಭಾ ಪುರಸ್ಕಾರ, ಹಿರಿಯರ ಗೌರವ ಮತ್ತು ಜನಪ್ರತಿನಿಧಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯ ವಹಿಸಿದರು.

ಈ ಸಂದರ್ಭದಲ್ಲಿ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಖಿಲ ಭಾರತ ಮಹಾಸಭಾದ ಭದ್ರಾವತಿ ಘಟಕದ ಅಧ್ಯಕ್ಷ ಕೆ.ಎಸ್. ವಿಜಯ್ ಕುಮಾರ್, ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಣಬೇರು ರಾಜಣ್ಣ, ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಭದ್ರಾವತಿ ಶಾಸಕ ಹಾಗೂ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ, ಭದ್ರಾವತಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ ಸೇರಿದಂತೆ ಅನೇಕ ಸಮಾಜದ ಪ್ರಮುಖ ಮುಖಂಡರು ಭಾಗವಹಿಸಿದ್ದರು.

Leave a Comment