ಹೊಸನಗರ ; 2006 ಮತ್ತು 2007ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿರುವ ಫಲಾನುಭವಿಗಳು ಪರಿಪಕ್ವ ಮೊತ್ತ ಪಡೆಯಲು ತಂತ್ರಾಂಶದಲ್ಲಿ ಅಳವಡಿಸಲು ಇದೇ ಅಕ್ಟೋಬರ್ 31 ಕಡೆಯ ದಿನವಾಗಿದೆ ಎಂದು ಹೊಸನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಿಪಿಒ ಗಾಯತ್ರಿ ತಿಳಿಸಿದ್ದಾರೆ.
2006 ಹಾಗು 2007ರಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಅಡಿ ನೋಂದಣಿ ಆಗಿರುವ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡು ಪರಿಪಕ್ವ ಮೊತ್ತವನ್ನು ಮಂಜೂರು ಮಾಡಲು ಈಗಾಗಲೇ ತಂತ್ರಾಂಶದಲ್ಲಿ ಅಳವಡಿಸಲಾಗಿದೆ.
ಈ ಸಾಲಿನಲ್ಲಿ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ, ಅರ್ಹ ಫಲಾನುಭವಿಗಳು ಈ ಕೂಡಲೇ ಇಲಾಖೆಯನ್ನು ಸಂಪರ್ಕಿಸಲು ಕೋರಿದ್ದು, ಅ. 31 ಕಡೆಯ ದಿನವಾಗಿದೆ. ಅರ್ಹ ಫಲಾನುಭವಿಗಳು ಕಚೇರಿಗೆ ಭೇಟಿ ನೀಡಿ ಸಹಕರಿಸುವಂತೆ ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.