ಹೊಸನಗರ ; ಚಿರತೆಯ ಮೃತದೇಹವೊಂದು ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ
ಪತ್ತೆಯಾಗಿದೆ.
ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದ ಸ.ನಂ.20 ರಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ.
ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್‌ಎಫ್‌ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಬಳಿಕ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೃತದೇಹ ಪತ್ತೆಯಾದ ಜಾಗದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಗಿದೆ.
ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





