ಭದ್ರಾವತಿ

ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ !

ಭದ್ರಾವತಿ : ಕೂಡ್ಲಿಗೆರೆ ಗ್ರಾಮದಲ್ಲಿನ ಎಪಿಎಂಸಿ ಮಾಜಿ ನಿರ್ದೇಶಕಿ ಸುಜಾತ ಅವರ ಟಿವಿಎಸ್ ಫಾರಂನಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇದಕ್ಕೂ ಮುನ್ನ, ಸುಮಾರು ಆರೇಳು ತಿಂಗಳ ಹಿಂದೆ ಇದೇ ರೀತಿಯ ಘಟನೆ ನಡೆದಿದೆ. ಇದರಿಂದಾಗಿ ಸ್ಥಳೀಯರು ಹಾಗೂ ಮನೆಯವರು ಭಯಭೀತರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸುಜಾತ ಅವರ ಫಾರಂನಲ್ಲಿ ನಾಯಿಗಳನ್ನು ರಕ್ಷಣೆಗಾಗಿ ಸಾಕಲಾಗಿತ್ತು. ಆದರೆ, ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ಹೊರಟಾಗ ನೋಡುವಂತೆ ಎರಡು ಮರಿನಾಯಿಗಳು ಮಾತ್ರ ಇದ್ದವು. ಅನುಮಾನಗೊಂಡು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಿದಾಗ, ಬೆಳಗಿನಜಾವ 2:03ಕ್ಕೆ ಚಿರತೆಯೊಂದು ಬಂದು ಹೆಣ್ಣು ಕರಿ ನಾಯಿಯನ್ನು ಬಾಯಿಯಲ್ಲಿ ಕಚ್ಚಿಕೊಂಡು ಹೊತ್ತೊಯ್ಯುವ ದೃಶ್ಯ ಕಂಡುಬಂದಿದೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/195S3Xpt6v/

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸ್ಥಳೀಯರು ಅರಣ್ಯ ಇಲಾಖೆ ಬೋನುಗಳ ಮೂಲಕ ಚಿರತೆ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೂ, ಈ ರೀತಿಯ ಘಟನೆಗಳು ಇನ್ನೂ ಮತ್ತೆ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಹಾಗೂ ಪಶುಪಾಲಕರು ಒತ್ತಾಯಿಸಿದ್ದಾರೆ.

ಈ ಘಟನೆ ಸ್ಥಳೀಯರ ನಡುವೆ ಭೀತಿಯನ್ನೂ, ಜಾಗೃತಿ ಅಗತ್ಯವಿರುವುದನ್ನೂ ಹೆಚ್ಚಿಸಿದೆ. ಭದ್ರಾವತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಗಳ ಪ್ರಭಾವ ಹೆಚ್ಚುತ್ತಿರುವುದರಿಂದ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]