Shivamogga News

ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು !

ತೀರ್ಥಹಳ್ಳಿ : ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಂಡಗದ್ದೆ ಬಳಿ ಮೇ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆಯೊಂದು ಅಡ್ಡ ಬಂದಿದೆ. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ಸವಾರ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ. ಈ ಪರಿಣಾಮ ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>