Ripponpete

ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

ರಿಪ್ಪನ್‌ಪೇಟೆ ; ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಡೇರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಭಾನುವಾರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1LHvvpQYoZ/

ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಗ್ರಾಮದ ಅಲ್ಲಲ್ಲಿ ಕಂಡುಬಂದಿದೆ‌.

ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>