HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಲೆ ಮಳವಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಗುರುವಾರ ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಗ್ಗೆ ಹಾಲು ತರಲು ತೆರಳುತ್ತಿದ್ದ ವೇಳೆ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ಸಾಕು ಪ್ರಾಣಿಗಳು ಹಾಗೂ ದನ-ಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದ್ದು ಚಿರತೆ ಕೆಲ ಗ್ರಾಮಸ್ಥರಿಗೆ ಕಂಡಿದೆಯಾದರೂ ಅರಣ್ಯ ಇಲಾಖೆ ಸಿಬ್ಬಂದಿಗೆ ಜಾಡು ಹಿಡಿಯಲು ಅಸಾಧ್ಯವಾದ ಕಾರಣ ಗ್ರಾಮಸ್ಥರೇ ಮೊಬೈಲ್ ನಲ್ಲಿ ಚಿರತೆ ಹೆಜ್ಜೆಯ ಫೋಟೋ ಸೆರೆಹಿಡಿದು ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದಯವಿಟ್ಟು ಚಿರತೆಯನ್ನು ಸೆರೆ ಹಿಡಿಯಿರಿ ಅಥವಾ ಓಡಿಸಿ ಎಂದು ಅರಣ್ಯಾಧಿಕಾರಿಗಳಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.