ಬಾಳೆಹೊನ್ನೂರು ; ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಬೆಳೆಯುವ ಯುವ ಜನಾಂಗದಲ್ಲಿ ರಾಷ್ರಾಭಿಮಾನ ಬೆಳೆದು ಬರುವ ಅವಶ್ಯಕತೆ ಇದೆಯೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಶ್ರೀ ಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢ ಶಾಲೆ ಹಾಗೂ ಶ್ರೀ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಆಶೀರ್ವಚನ ನೀಡುತ್ತಿದ್ದರು.

ರುದ್ರಮುನೀಶ್ವರ ವಸತಿ ಪ್ರೌಢ ಶಾಲೆ ಹಾಗೂ ಶ್ರೀ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ
ರಂಭಾಪುರಿ ಜಗದ್ಗುರುಗಳು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಹಲವಾರು ದೇಶ ಭಕ್ತರ ಪರಿಶ್ರಮದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆಯಿತು. ಅವರ ತ್ಯಾಗ ಹೋರಾಟ ಮತ್ತು ಬಲಿದಾನ ಮರೆಯಲಾಗದು. ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿ ಮಹಾತ್ಮಾ ಗಾಂಧೀಜಿ, ವಲ್ಲಭಭಾಯಿ ಪಟೇಲ, ಸುಭಾಷಚಂದ್ರ ಬೋಸ್, ಜವಾಹರಲಾಲ್ ನೆಹರೂ, ಬಾಲಗಂಗಾಧರ ತಿಲಕ, ಲಾಲಾ ಲಜಪತರಾಯ, ಸರೋಜಿನಿ ನಾಯ್ಡು ಇನ್ನೂ ಮೊದಲಾದ ನಾಯಕರ ನಿರಂತರ ಹೋರಾಟದಿಂದ ಭಾರತ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಯಿತು.

ರುದ್ರಮುನೀಶ್ವರ ವಸತಿ ಪ್ರೌಢ ಶಾಲೆ ಹಾಗೂ ಶ್ರೀ ವೀರಭದ್ರೇಶ್ವರ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ
ರಂಭಾಪುರಿ ಜಗದ್ಗುರುಗಳು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ನಂತರ ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆ. ಸಶಕ್ತ ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಅನೇಕ ರಾಜಕೀಯ ಧುರೀಣರು ಶ್ರಮಿಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ, ನೀರಾವರಿ, ಉದ್ಯೋಗ, ಬಡತನ ನಿವಾರಣೆ, ಅಸ್ಪçಶ್ಯೋದ್ದಾರ ಮಾಡುವಲ್ಲಿ ಶ್ರಮಿಸುತ್ತ ಬಂದಿದೆ. ಭವಿಷ್ಯತ್ತಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲಿ ದೇಶಾಭಿಮಾನ ರಾಷ್ಟ್ರ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ. ವಿವಿಧತೆಯಲ್ಲಿ ಏಕತೆಯಿಂದ ಬಾಳುವ ಮನೋಭಾವ ಎಲ್ಲರಲ್ಲೂ ಬೆಳೆದು ಬರಬೇಕೆಂದು ಆಶಿಸಿದರು.
ಶಾಲಾ ಪ್ರಭಾರಿ ಮುಖ್ಯೋಪಾಧ್ಯಾಯ ವೀರೇಶ ಕುಲಕರ್ಣಿ, ಸಹ ಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯ ಕುಮಾರ, ಮಹೇಶ ಆಚಾರಿ, ನೆಗಳೂರು ಮತ್ತು ಹುಡುಗಿ ಶ್ರೀಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.