Hombuja

ಶರನ್ನವರಾತ್ರಿ ಪರ್ವಾಚರಣೆ  ತೃತೀಯ ದಿನ ಮುತ್ತಿನಂತೆ ಧ*ರ್ಮಪ್ರಜ್ಞೆ ಪ್ರತಿಫಲಿಸಲಿ ; ಹೊಂಬುಜ ಶ್ರೀ

ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ ಮಾಡುವಂತಾಗಲಿ” ಎಂದು ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಂಬುಜ ಆತಿಶಯ ಮಹಾಕ್ಷೇತ್ರದಲ್ಲಿ ಶರನ್ನವರಾತ್ರಿ ಪರ್ವಾಚರಣೆ ತೃತೀಯ ದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿನಾಯಕ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರು ಮತ್ತು ಲೋಕವಂದ್ಯ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ ಪೂಜಾ ವಿಧಿ-ವಿಧಾನಗಳು ನೆರವೇರಿದವು.

ಶ್ರೀಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ನೇತೃತ್ವ, ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಬೆಳಿಗ್ಗೆ ಕುಮುದ್ವತಿ ತೀರ್ಥದಿಂದ ಅಗ್ರೋದಕವನ್ನು ಐಶ್ವರ್ಯ ಗಜರಾಣಿಯೊಂದಿಗೆ ವಾದ್ಯಗೋಷ್ಠಿ, ಜಿನಸ್ತುತಿಯೊಂದಿಗೆ ತರಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀಕ್ಷೇತ್ರಪಾಲ ಹಾಗೂ ಶ್ರೀ ನಾಗಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನೆರವೇರಿದವು.

ಸೇವಾಕರ್ತರಾದ ಮುಂಬೈನ ಶ್ರೀಮತಿ ರೀತು ಶ್ರೀ ಸಚಿನ್ ಜೈನ್ ಉಪಸ್ಥಿತರಿದ್ದರು.ಊರ ಪರವೂರ ಭಕ್ತವೃಂದದವರು, ಶ್ರೀ ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಶ್ರೀ ಪದ್ಮಾವತಿ ಮಹಿಳಾ ಸಮಾಜದವರು ಪೂಜಾ ವಿಧಾನದಲ್ಲಿ ಮುತ್ತಿನ ಸರ್ವಾಲಂಕಾರಭೂಷಿತ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪುಷ್ಪ-ಫಲ-ನೈವೇದ್ಯ ಸಮರ್ಪಿಸಿ, ಭಕ್ತವೃಂದದವರು ಧನ್ಯತಾಭಾವ ತಳೆದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>