HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮತ್ತೆ ಮಳೆ ಕ್ಷೀಣಿಸಿದೆ.
ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಎಂದು ಈ ಕೆಳಗೆ ನೀಡಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
- ಮಾಸ್ತಿಕಟ್ಟೆ : 104 mm
- ಹುಲಿಕಲ್ : 98.4 mm
- ಚಕ್ರಾನಗರ : 91 mm
- ಕಾರ್ಗಲ್ : 82.4 mm
- ಯಡೂರು : 78 mm
- ಹುಂಚ : 76.4 mm
- ಮಾಣಿ : 68 mm
- ಬಿದನೂರುನಗರ : 62 mm
- ರಿಪ್ಪನ್‌ಪೇಟೆ : 28.4 mm
- ಹೊಸನಗರ : 18 mm
ಲಿಂಗನಮಕ್ಕಿ ಜಲಾಶಯ :
ಗರಿಷ್ಠ 1819 ಅಡಿ ಹೊಂದಿರುವ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಸೋಮವಾರ ಬೆಳಗ್ಗೆ 8:00 ಗಂಟೆಗೆ 1797.60 ಅಡಿ ತಲುಪಿದ್ದು ಜಲಾಶಯಕ್ಕೆ 44387 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೆ ಅವಧಿಗೆ ಜಲಾಶಯದ ನೀರಿನ ಮಟ್ಟ ಅಡಿ ದಾಖಲಾಗಿತ್ತು. ಈ ವರ್ಷ ಕಳೆದ ವರ್ಷಕ್ಕಿಂತ 32 ಹೆಚ್ಚು ನೀರು ಸಂಗ್ರಹವಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.