Featured

ಈ ಸಮುದಾಯದವರಿಗೆ ಸಿಗಲಿದೆ ₹5 ಲಕ್ಷವರೆಗೆ ಸಾಲ । ಅರ್ಜಿ ಸಲ್ಲಿಸುವುದು ಹೇಗೆ ?

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025–26ನೇ ಸಾಲಿನ ವಿವಿಧ ಯೋಜನೆಗಳಡಿಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಯೋಜನೆಗಳಿಂದ ಉದ್ಯೋಗ, ಶಿಕ್ಷಣ ಹಾಗೂ ಆರ್ಥಿಕ ಶಕ್ತಿಕರಣಕ್ಕೆ ಉತ್ತೇಜನ ನೀಡುವ ಉದ್ದೇಶವಿದೆ.

WhatsApp Group Join Now
Telegram Group Join Now
Instagram Group Join Now

ಅರ್ಜಿ ಆಹ್ವಾನಿತ ಯೋಜನೆಗಳು:

  • ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
  • ಗಂಗಾಕಲ್ಯಾಣ ನೀರಾವರಿ ಯೋಜನೆ
  • ಅರಿವು ಶೈಕ್ಷಣಿಕ ಸಾಲ ಯೋಜನೆ
  • ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ
  • ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದಿಂದ)
  • ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
  • ಹೊಲಿಗೆ ಯಂತ್ರ ವಿತರಣೆ ಯೋಜನೆ

ನಿಯಮಗಳು:

ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದ ಪವರ್ಗ 1, 2ಎ, 3ಎ, 3ಬಿ ನಲ್ಲಿರುವ ಸಮುದಾಯಗಳಿಗೆ ಅವಕಾಶವಿದೆ. ಆದರೆ ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಅವರ ಉಪ ಸಮುದಾಯಗಳು ಈ ಯೋಜನೆಗೆ ಅರ್ಹರಲ್ಲ.

  • ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ಜೋಡಣೆ ಇರಬೇಕು.
  • ಆಧಾರ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರಬೇಕು.
  • ಒಂದು ಕುಟುಂಬದಿಂದ ಕೇವಲ ಒಬ್ಬ ಅಭ್ಯರ್ಥಿಗೆ ಮಾತ್ರ ಸೌಲಭ್ಯ ಲಭ್ಯವಿರುತ್ತದೆ.
  • ಈಗಾಗಲೇ ನಿಗಮದ ಯಾವುದೇ ಯೋಜನೆಯ ಲಾಭ ಪಡೆದಿದ್ದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
  • 2023–24 ಹಾಗೂ 2024–25ರಲ್ಲಿ ಅರ್ಜಿ ಸಲ್ಲಿಸಿ ಪ್ರಾವಿಶನಲ್ ಆಯ್ಕೆಯಾಗಿರುವವರು ಸಹ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

ಅರ್ಜಿ ಸಲ್ಲಿಕೆ ಹೇಗೆ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ www.dbcdc.karnataka.gov.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ, ದಾಖಲೆಗಳು ಹಾಗೂ ಆಯ್ಕೆ ನಿಯಮಾವಳಿ ಇತ್ಯಾದಿ ಮಾಹಿತಿ ಸೈಟ್‌ನಲ್ಲಿ ಲಭ್ಯವಿದೆ.

Read More :Prize Money Scholarship 2024-25 : ವಿದ್ಯಾರ್ಥಿಗಳಿಗೆ ₹35,000 ರವರೆಗೆ ಸಹಾಯಧನ – ಈಗಲೇ ಅರ್ಜಿ ಸಲ್ಲಿಸಿ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650