ಶಿವಮೊಗ್ಗ, ಜೂನ್ 21: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಅನೇಕ ಉದ್ದೇಶಿತ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಆಹ್ವಾನಿತ ಯೋಜನೆಗಳು:
- ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
- ಬ್ಯಾಂಕ್ ಸಹಯೋಗದೊಂದಿಗೆ ಆಹಾರ ವಾಹಿನಿ/ವಾಹಿನಿ ಯೋಜನೆ
- ವಾಸತಿ ಜಲಶಕ್ತಿ ಯೋಜನೆ
- ಅರಿವು ಶೈಕ್ಷಣಿಕ ಸಾಲ ಯೋಜನೆ (CET, NEET ಕೌನ್ಸೆಲಿಂಗ್ ನಂತರ ಆರಂಭವಾಗಲಿದೆ)
ಅರ್ಹತಾ ನಿಯಮಗಳು:
- ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಾಗಿರಬೇಕು.
- ಅರ್ಜಿದಾರರು ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು.
- ಅರ್ಜಿದಾರರು ಕರ್ನಾಟಕದ ನಿವಾಸಿಗಳು ಆಗಿರಬೇಕು.
- ಅವರ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗತ್ಯವಿದೆ.
ಅರ್ಜಿ ಪರಿಶೀಲನೆಯು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮುಖಾಂತರ ನಡೆಯಲಿದ್ದು, ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿಶೇಷ ಮಾಹಿತಿ: 2019–20ರಿಂದ 2021–22 ರವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆದು, ಸಕಾಲದಲ್ಲಿ ಸಂಪೂರ್ಣ ಮರುಪಾವತಿ ಮಾಡಿದ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಹೆಚ್ಚಿನ ವಿವರಗಳಿಗೆ: ನಿಗಮದ ಸಹಾಯವಾಣಿ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಸಂಪರ್ಕಿಸಬಹುದಾಗಿದೆ.ನಿಗಮದ ಸಹಾಯವಾಣಿ ಸಂಖ್ಯೆ 9448451111, ವೆಬ್‌ಸೈಟ್ kacdc.karnataka.gov.in ಇಲ್ಲಿ ಹಾಗೂ ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ 577201
Read More :ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650