ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ನಡೆದ ಲೋಕ್ ಅದಾಲತ್

Written by malnadtimes.com

Published on:

HOSANAGARA ; ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಒಟ್ಟು 3210 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು ಅದರಲ್ಲಿ ಲೋಕ್ ಅದಾಲತ್‌ಗೆ 1408 ಪ್ರಕರಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು 1234 ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವುದರ ಜೊತೆಗೆ 99,86,762 ರೂಪಾಯಿಗಳನ್ನು ಸರ್ಕಾರದ ಬೊಕ್ಕಸಕ್ಕೆ ಜಮಾ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now

ಈ ಲೋಕ್ ಅದಾಲತ್ ನಡೆಸಲು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಹದಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್‌ರವರು ಆಗಮಿಸಿ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇವರ ಜೊತೆಗೆ ಹೊಸನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಫಾರೂಖ ಝಾರೆ ಹಾಗೂ ಪ್ರಧಾನ ವ್ಯವಹಾರ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಸದಸ್ಯ ಕಾರ್ಯದರ್ಶಿ ಮಾರುತಿ ಶಿಂಧೆ ಹಾಗೂ ಹೊಸನಗರದ ಎಲ್ಲ ಹಿರಿಯ ಕಿರಿಯ ನ್ಯಾಯಾವಾದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಆಗಮಿಸಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು.

Leave a Comment