ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಮತ ಎಣಿಕೆ, ವಾಹನಗಳ ಮಾರ್ಗ ಬದಲಾವಣೆ ಮಾಡಿ ಡಿಸಿ ಆದೇಶ

Written by malnadtimes.com

Published on:

ಶಿವಮೊಗ್ಗ : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ (Shivamogga Loksabha Constituency) ಮತ ಎಣಿಕೆ (Vote Counting) ಕಾರ್ಯವು ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ (Vehicle’s) ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ (Shivamogga DC) ಗುರದತ್ತ ಹೆಗಡೆ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ
 • ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀ. ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
 • ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‍ಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು.
 • ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬಂದು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‍ಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣಕ್ಕೆ ಹೋಗುವುದು.
 • ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‍ಗಳನ್ನು 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.
 • ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‍ಗಳು ಎ. ಎ. ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
 • ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್. ಸರ್ಕಲ್ ಕಡೆಗೆ ಹೋಗುವುದು.
 • ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬ್ಯುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ.
 • ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ಪಾರ್ಕಿಂಗ್‍ಗೆ ಅನುಮತಿಸಿದೆ.
 • ಎಂ.ಆರ್.ಎಸ್. ಸರ್ಕಲ್‍ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ವಾಹನಗಳ ಪಾರ್ಕಿಂಗ್‍ಗೆ ಅನುಮತಿ ನೀಡಿದೆ.
 • ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆ ಎಂ.ಆರ್.ಎಸ್. ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು.
 • ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ವೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ಪಾರ್ಕಿಂಗ್‍ಗೆ ಅನುಮತಿ ನೀಡಿದೆ.
 • ಎಂ.ಆರ್.ಎಸ್. ಸರ್ಕಲ್‍ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್‍ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.

Read More

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ನಿಶ್ಚಿತ ; ಬೇಳೂರು ವಿಶ್ವಾಸ

Leave a Comment