ಶಿವಮೊಗ್ಗ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಗಂಭೀರ ಆರೋಪ ಮಾಡಿದ್ದು, ಚುನಾವಣೆ ಪ್ರಕ್ರಿಯೆಯ ಮೇಲೆ ದೊಡ್ಡ ಪ್ರಶ್ನೆ ಹಾಕಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿಲ್ಲ ಎಂದು ಹೇಳಲಾಗದು. ಖಂಡಿತವಾಗಿಯೂ ಅಕ್ರಮ ನಡೆದಿದೆ ಎಂಬ ನಂಬಿಕೆ ನನಗಿದೆ. ಇಲ್ಲವಾದರೆ ಬಿಜೆಪಿ ಇಷ್ಟು ಸೀಟು ಗೆಲ್ಲುತ್ತಿರಲಿಲ್ಲ,” ಎಂದರು.

ಚುನಾವಣೆ ಆಯೋಗದ ನಿಷ್ಠೆ ಪ್ರಶ್ನೆ:

ಬೇಳೂರು ಅವರು ರಾಹುಲ್ ಗಾಂಧಿಯವರ ಹೇಳಿಕೆಗೆ ಬೆಂಬಲ ನೀಡಿದ್ದು, “ರಾಜ್ಯ ಚುನಾವಣಾ ಆಯೋಗದ ನಿಷ್ಠೆ ಕುರಿತಾಗಿ ಗಂಭೀರ ಅನುಮಾನಗಳು ಹುಟ್ಟಿವೆ. ರಾಹುಲ್ ಗಾಂಧಿಯವರು ಈ ಕುರಿತು ಮಾಡಿರುವ ಆರೋಪಗಳು ತೀವ್ರವಾಗಿವೆ ಮತ್ತು ಅವು ಕಡೆಗಣಿಸಬಾರದಷ್ಟು ಮಹತ್ವಪೂರ್ಣ,” ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕಳ್ಳ ಮತದಾನದಿಂದಲೇ ಗೆದ್ದಿರೋದು.

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದರೆಂದು ಬಿಜೆಪಿ ಆರೋಪಿಸಿದೆ. ಆದರೆ ಇಂದಿನ ಮೋದಿ ಸರ್ಕಾರವೇ ಬೇರೆ ರೀತಿಯಲ್ಲಿ ತುರ್ತು ಪರಿಸ್ಥಿತಿಯನ್ನು ದೇಶದ ಮೇಲೆ ಹಾಕಿದೆ. ಇಡೀ ವ್ಯವಸ್ಥೆ – ಐಟಿ ಇಲಾಖೆ, ಸಿಬಿಐ, ಇಡಿ – ಎಲ್ಲವೂ ಕೇವಲ ಕೇಂದ್ರ ಸರ್ಕಾರದ ಕೈಯಲ್ಲಿವೆ,” ಎಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆಗಸ್ಟ್ 8ರಂದು ಬೃಹತ್ ಪ್ರತಿಭಟನೆ:

ಆಗಸ್ಟ್ 8ರಂದು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಚುನಾವಣಾ ಅಕ್ರಮಗಳ ವಿರುದ್ಧ ಹಾಗೂ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದ್ದು, “ಈ ಹೋರಾಟಕ್ಕೆ ಎಲ್ಲರ ಸಹಕಾರವಿರಬೇಕು,” ಎಂದು ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ.

ತಾಳಗುಪ್ಪ – ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ – ನೂತನ ವೇಳಾಪಟ್ಟಿ ಪ್ರಕಟ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650