KADURU ; ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಡಾ.ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ನೇಮಕವಾಗಿದ್ದು, 2023 ರಿಂದ ಕಡೂರು ತಾಲೂಕು ವೈದ್ಯಾಧಿ ಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2020 ರಿಂದ 2023 ರ ವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
1995 ರಿಂದ ಸೇವೆಗೆ ಸೇರಿದಲ್ಲಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕಾನೂನು ಬದ್ದ ಮೂಲ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಚಿರಾಸ್ಥಿ ಹಾಗೂ ಚರಾಸ್ಥಿ ಸಂಪಾದನೆ ಮಾಡಿದ್ದಾರೆ ಆರೋಪವಿದೆ.
ಪತ್ನಿ ಟಿ.ಎಸ್.ಮಂಜುಳ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿ ಮಾಡಿದ್ದಾರೆ. ಇಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಎ.ಜಿ. ರಾಥೋಡ್ ಸಲ್ಲಿಸಿರುವ ವರದಿ ಆಧರಿಸಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.