CHIKKAMAGALURU ; ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, 1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್, ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ರೂ. ಲಂಚ ಕೇಳಿದ್ದರು.
ಮೂಡಿಗೆರೆ ತಾಲ್ಲೂಕಿನ ಆಟೋ ಚಾಲಕ ಶ್ರೀಧರ್ ಸಮಾಜ ಕಲ್ಯಾಣ ಇಲಾಖೆಯಿಂದ ದೊರೆಯುವ ನೇರ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು, ಸೌಲಭ್ಯ ನೀಡಲು ಕಾಂತರಾಜ್ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಅರ್ಜಿದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಶುಕ್ರವಾರ ಕಚೇರಿಯಲ್ಲಿ ಲಂಚದ ಹಣ 10 ಸಾವಿರ ರೂ. ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಾಂತರಾಜನನ್ನು ಬಂಧಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.