SAGARA | ಟಿಪ್ಪರ್ ಲಾರಿ (Larry) ಮತ್ತು ಬೈಕ್ (Bike) ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಗರ ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಗುರುವಾರ ಮಧ್ಯಾಹ್ನ ಆವಿನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ.
ಗಾಯಾಳು ಕಟ್ಟಿನಕಾರು ಗ್ರಾಮದ ಬೈಕ್ ಸವಾರ ಸಚಿನ್ (19) ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಹಸವಾರ ಸುಮಂತ್‌ರಿಗೆ ಗಾಯಗಳಾಗಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗೆಣಸಿಕುಣಿಯ ಸಂಪೇಕೈ ಮಂಜು ಎನ್ನುವವರಿಗೆ ಸೇರಿದ್ದ ಟಿಪ್ಪರ್ ಲಾರಿ ಸಾಗರದಲ್ಲಿ ರಿಪೇರಿ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸಚಿನ್‌ರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸಚಿನ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.