ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ತೀರ್ಥಹಳ್ಳಿ – ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.