ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ ಇಂದು ಸಂಜೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.
ಸ್ಫೋಟದ ಪರಿಣಾಮ ಮನೆಮಾಲೀಕ ಎಂ.ಬಿ. ಪೀರಾನ್ ಸಾಬ್ (48), ಅವರ ಪತ್ನಿ ಸಾಹೇರಾ (40) ಮತ್ತು ಸೊಸೆ ಜಯೇಬಾ (22) ಗಾಯಗೊಂಡಿದ್ದಾರೆ. ಮೂವರನ್ನೂ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀರಾನ್ ಸಾಬ್ ಅವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸ್ಫೋಟದ ಶಬ್ದದಿಂದ ಸುತ್ತಮುತ್ತಲಿನ ನಿವಾಸಿಗಳು ತೀವ್ರ ಭೀತಿಗೆ ಒಳಗಾದರು. ಸಿಲಿಂಡರ್ ಸ್ಫೋಟದಿಂದ ಮನೆಯ ಛಾವಣಿ ಸಂಪೂರ್ಣವಾಗಿ ಹಾರಿ ಹೋಗಿದ್ದು,ಭಾರಿ ಹಾನಿಯಾಗಿದೆ.
ಘಟನೆಯ ಕುರಿತು ಮಾತನಾಡಿದ ಗಾಯಾಳುಗಳು, “ಮನೆಯ ಮುಂದೆ ಕುಳಿತಿದ್ದಾಗ ಬೆಂಕಿ ಕಾಣಿಸಿಕೊಂಡಿತು; ಕೆಲವೇ ಕ್ಷಣದಲ್ಲಿ ಸ್ಫೋಟವಾಯಿತು,” ಎಂದು ತಿಳಿಸಿದ್ದಾರೆ. ಪೀರಾನ್ ಸಾಬ್ ಅವರ ದೇಹದ ಹೆಚ್ಚಿನ ಭಾಗಗಳು ಸುಟ್ಟಿದ್ದು, ತೀವ್ರ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಿಯಂತ್ರಿಸಿದರು ಹಾಗೂ ಪರಿಸ್ಥಿತಿ ಪರಿಶೀಲಿಸಿದರು. ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರೆಸಿದ್ದಾರೆ.
lpg gas blast in shivamogga
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.