ರಿಪ್ಪನ್‌ಪೇಟೆ: ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಂ.ಬಿ. ಮಂಜುನಾಥ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ. ರಾಮಚಂದ್ರ ಕೆರೆಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
33 ವರ್ಷಗಳ ಇತಿಹಾಸ ಹೊಂದಿರುವ ಸಂಘದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ವಿಶೇಷ ಸಭೆ ಕರೆಯಲಾಗಿತ್ತು. ನಿಕಟಪೂರ್ವ ಅಧ್ಯಕ್ಷ ಮುರುಳಿ ಕೆರೆಹಳ್ಳಿ ಸಮ್ಮುಖದಲ್ಲಿ ಜರುಗಿದ ಈ ಸಭೆಯಲ್ಲಿ, ಸರ್ವ ಸದಸ್ಯರ ಒಮ್ಮತದ ಮೇರೆಗೆ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಯಿತು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

