ಹೊಸನಗರ

ಎಂ. ಗುಡ್ಡೇಕೊಪ್ಪ ಗ್ರಾ.ಪಂ. ಉಪಚುನಾವಣೆ ; ಕಳೂರು ವಾರ್ಡ್‌ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕಲಾ ನಾಮಪತ್ರ ಸಲ್ಲಿಕೆ

HOSANAGARA | ಇದೇ 23ಕ್ಕೆ ತಾಲೂಕಿನ ಎಂ‌.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ವಾರ್ಡ್‌ಗೆ ತೆರುವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಶಶಿಕಲಾ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಚುನಾವಣಾ ನೋಡಲ್ ಅಧಿಕಾರಿಯಾದ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪುಟ್ಟನಾಯ್ಕ ಅವರು ಅಭ್ಯರ್ಥಿ ಶಶಿಕಲಾ ಅವರಿಂದ ನಾಮಪತ್ರ ಪಡೆದರು.

ಈ ವೇಳೆ ಕಾಂಗ್ರೆಸ್ ಹೊಸನಗರ ಟೌನ್ ಘಟಕದ ಅಧ್ಯಕ್ಷ ಕೆ.ಎಸ್.ಗುರುರಾಜ್, ಗ್ರಾಮ ಪಂಚಾಯತಿ ಸದಸ್ಯ ಮಹೇಂದ್ರ, ದಿವ್ಯ ಪ್ರವೀಣ್, ಬೇಕರಿ ಪ್ರವೀಣ್, ಬಾಬಣ್ಣ, ಲೋಕೇಶ್ ಮಂಡಾನಿ, ಉಬೇದ್ ಸಾಬ್, ಟಾಕಪ್ಪ, ಕಳೂರು ಕೃಷ್ಣಮೂರ್ತಿ, ಕೃಷ್ಣಶೆಟ್ಟಿ ಮೊದಲಾದವರು ಇದ್ದರು.


ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿರ್ಮಲಾ ರಾಘವೇಂದ್ರ ನಾಮಪತ್ರ ಸಲ್ಲಿಕೆ

HOSANAGARA | ಇದೇ ನ.23 ರಂದು ನಡೆಯುವ ತೆರುವಾಗಿದ್ದ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಕಳೂರು ವಾರ್ಡ್‌ನ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ಮಲಾ ರಾಘವೇಂದ್ರ ಇಂದು ಚುನಾವಣಾ ನೋಡಲ್ ಅಧಿಕಾರಿ ಪುಟ್ಟನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜೆ.ಎನ್. ಪ್ರವೀಣ್ ಸದಸ್ಯರಾದ ಕಾಲ್ಸಸಿ ಸತೀಶ್, ನೇರ್ಲೆ ರಮೇಶ್, ಸವಿತಾ ರಮೇಶ್ ಸೇರಿದಂತೆ ಹಲವರು ಇದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!