ಶಿವಮೊಗ್ಗ ಸುದ್ದಿ

80 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಗೃಹ ಸಮುಚ್ಚಯ ಲೋಕಾರ್ಪಣೆ ; ಮಧು ಬಂಗಾರಪ್ಪ

SORABA | ಶಿವಮೊಗ್ಗ (Shivamogga) ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಗುಣಮಟ್ಟದಿಂದ ಕೂಡಿದ ಸುಸಜ್ಜಿತ ವಸತಿಗೃಹಗಳನ್ನು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ನುಡಿದರು.

WhatsApp Group Join Now
Telegram Group Join Now
Instagram Group Join Now

ಅವರು ಇಂದು ಸೊರಬದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್ ವಸತಿಗೃಹ ಸಮುಚ್ಚಯ ಉದ್ಘಾಟಿಸಿ ಮಾತನಾಡಿ, ಗೃಹ ಸಚಿವರೇ ಇಂದು ವಸತಿಗೃಹ ಸಮುಚ್ಚಯವನ್ನು ಉದ್ಘಾಟಿಸಬೇಕಿತ್ತು. ಕಾರಣಾಂತರದಿಂದ ಬರಲು ಆಗಲಿಲ್ಲ. ಸೊರಬಕ್ಕೆ 8 ಕೋಟಿ ರೂ. ಸೇರಿದಂತೆ ಜಿಲ್ಲೆಯಲ್ಲಿ 80 ಕೋಟಿ ರೂ. ವೆಚ್ಚದ ವಸತಿಗೃಹ ಲೋಕಾರ್ಪಣೆ ಆಗುತ್ತಿರುವುದು ಸಂತೋಷದ ವಿಷಯ. ವಸತಿಗೃಹಗಳು ಗುಣಮಟ್ಟದಿಂದ, ಆಧುನಿಕತೆಯಿಂದ ಕೂಡಿದ್ದು ನಿವಾಸಿಗಳು ಚೆನ್ನಾಗಿ ನೋಡಿಕೊಳ್ಳಬೇಕು ಎಂದರು.

ಗಾಂಜಾ ಬೆಳೆಸಬೇಡಿ :

ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಇತರೆ ಕಾನೂನು ಬಾಹಿರ ವ್ಯವಹಾರಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಹಾಗೂ ಸಾರ್ವಜನಿಕರು‌ ಕೂಡ ಗಾಂಜಾ ಬೆಳೆಸಬೇಡಿ ಎಂದು ಮನವಿ‌ ಮಾಡಿದರು.

ಶರಾವತಿ ನದಿಯಿಂದ ಕುಡಿಯುವ ನೀರು :

ವರದಾ ನದಿ‌ಗೆ 5 ಬ್ಯಾರೇಜ್ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. 50 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗುವುದು. ಶರಾವತಿ ನದಿಯಿಂದ ಸೊರಬ, ಆನವಟ್ಟಿ ಶಿರಾಳಕೊಪ್ಪ ಹಾಗೂ 356 ಹಳ್ಳಿಗಳಿಗೆ 586 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ನೀಡುವ ಯೋಜನೆಗೆ ಮಂಜೂರಾತಿ‌ ದೊರೆತಿದೆ. ಜಿಲ್ಲೆಯಲ್ಲಿ‌ ಮುಂದಿನ ದಿನಗಳಲ್ಲಿ ಪ್ರತಿ ಮನೆ ಮನೆಗೆ ಕುಡಿಯುವ ನೀರು ನೀಡಲಾಗುವುದು. ಸೊರಬ ತಾಲ್ಲೂಕಿಲ್ಲಿ 1383 ಕೆರೆ ಇದ್ದರೂ ಬೇಸಿಗೆಯಲ್ಲಿ ನೀರಿಗೆ ತುಂಬಾ ಕಷ್ಟ ಆಗುತ್ತದೆ ಆದ್ದರಿಂದ ಮುಳಗಡೆ ಇಲ್ಲದೆ ದಂಡಾವತಿ ಯೋಜನೆಯಿಂದ 70-80 ಕೆರೆ ತುಂಬಿಸುವ ಯೋಜನೆ ಮೂರು ನಾಲ್ಕು ತಿಂಗಳಲ್ಲಿ ಜಾರಿಗೆ ತರಲಾಗುವುದು.

ಒಕ್ಕಲೆಬ್ಬಿಸಬಾರದು :

ದರಕಾಸ್ತು ಭೂಮಿ ಸಮಸ್ಯೆಗಳಿಗೆ ಇತಿಶ್ರೀ ಹಾಡಲು ಸಮಿತಿ ರಚನೆ ಮಾಡಲಾಗುವುದು. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ಹೊಸದಾಗಿ ಸಾಗುವಳಿ ಮಾಡಬಾರದು ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

6 ದಿನವೂ ಮೊಟ್ಟೆ :

ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುವುದು. ಮುಂದಿನ ವರ್ಷದಿಂದ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಮೊದಲ ಹಂತದಲ್ಲಿ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ನೀಡಲಾಗುವುದು ಹಾಗೂ ವಾರದ 6 ದಿನ 10ನೇ ತರಗತಿವರೆಗಿನ ಮಕ್ಕಳಿಗೆ ಮೊಟ್ಟೆ ಎಂದರು ನೀಡಲಾಗುವುದು

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸ್ವಾಗತಿಸಿದರು. ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾಲ್ಕು ತಾಲೂಕುಗಳಲ್ಲಿ ಒಟ್ಟು 132 ಗುಣಮಟ್ಟದ ವಸತಿ‌ಗೃಹ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ 1.10 ಕೋಟಿ ಪೊಲೀಸರಿದ್ದು, 24 ಗಂಟೆ ಕೆಲಸ ಮಾಡುವ ಇವರಿಗೆ ಅನುಕೂವಾಗಲೆಂದು ವಸತಿಗೃಹ‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪ್ರಸ್ತುತ 10 ಸಾವಿರ ಗೃಹ ನಿರ್ಮಾಣಕ್ಕೆ ಮಂಜೂರು ದೊರೆತಿದ್ದು ಕಾಮಗಾರಿ‌ ಶುರು‌ವಾಗಿದೆ ಎಂದರು.

ಪುರಸಭೆ ಚುನಾಯಿತ ಸದಸ್ಯರು, ಪೂರ್ವ ವಲಯದ ಉಪ ಪೊಲೀಸ್ ಮಹಾನಿರೀಕ್ಷಕರಾದ ಬಿ.ರಮೇಶ್, ಮುಖ್ಯ ಅಭಿಯಂತರ ಬಿ.ಹೆಚ್ ಮಂಜುನಾಥ್, ಇತರರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]