Shivamogga News

ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

ವಿಧಾನಸೌಧದಲ್ಲಿ ನೂತನ ಕಚೇರಿ ಪೂಜೆ ನೆರವೇರಿಸಿದ ಸಚಿವ ಮಧು ಬಂಗಾರಪ್ಪ – mt madhu

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧಾನಸೌಧದಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಂಗಳೂರಿನ ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 262 ಮತ್ತು 262(A)ರಲ್ಲಿ ಸಚಿವರ ನೂತನ ಕಚೇರಿ ಕಾರ್ಯಾರಂಭವಾಗಿದ್ದು, ಶಾಸ್ತ್ರೋಕ್ತ ಪೂಜಾ ವಿಧಿವಿಧಾನಗಳೊಂದಿಗೆ ಮಧು ಬಂಗಾರಪ್ಪ ಅವರು ಕಚೇರಿ ಪ್ರವೇಶಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಭೀಮಣ್ಣ ಟಿ. ನಾಯ್ಕ್, ಭೀಮಸೇನ ಬಿ. ಚಿಮ್ಮನಕಟ್ಟಿ ಸೇರಿದಂತೆ ಪಕ್ಷದ ಹಿರಿಯರು, ಶಾಸಕರು, ಸಿಬ್ಬಂದಿ ವರ್ಗದವರು ಹಾಗೂ ಕಾರ್ಯಕರ್ತರು ಸಚಿವರಿಗೆ ಶುಭಾಶಯ ಕೋರಿದರು.

ತಮಗೆ ಶುಭಹಾರೈಸಿದ ಪಕ್ಷದ ಹಿರಿಯರು, ಶಾಸಕ ಮಿತ್ರರು, ಕಚೇರಿ ಸಿಬ್ಬಂದಿ, ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಸಚಿವ ಮಧು ಬಂಗಾರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜವಾಬ್ದಾರಿ ಮತ್ತೊಮ್ಮೆ ಮಧು ಬಂಗಾರಪ್ಪ ಅವರಿಗೆ ಲಭಿಸಿರುವ ಹಿನ್ನೆಲೆಯಲ್ಲಿ, ಇಲಾಖೆಯ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಶಿಕ್ಷಣ ಕ್ಷೇತ್ರದ ಯೋಜನೆಗಳ ಮೇಲೆ ಈಗ ಗಮನ ನೆಟ್ಟಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650