ಶಿವಮೊಗ್ಗ ಸುದ್ದಿ

ಬಿಜೆಪಿ ಪಾದಯಾತ್ರೆ ಬಗ್ಗೆ ಮಧು ಬಂಗಾರಪ್ಪ ವ್ಯಂಗ್ಯ, ಶಿವಮೊಗ್ಗದಲ್ಲಿ ಏನಂದ್ರು?

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾರೂ ಧರ್ಮ ಆಯ್ಕೆ ಮಾಡಿಕೊಂಡು ಹುಟ್ಟುವುದಿಲ್ಲ; ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವೇ ನಮಗೆ ಮುಖ್ಯ ಎಂದು ಹೇಳಿದರು. ಕೆಪಿಎಸ್‌ಸಿ ನೇಮಕಾತಿ ಲೋಪಗಳು ಹಾಗೂ ಬಿಜೆಪಿ ಪಾದಯಾತ್ರೆ ವಿಚಾರಗಳ ಮೇಲೂ ಅವರು ಪ್ರತಿಕ್ರಿಯಿಸಿದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ – madhu nb

ಶಿವಮೊಗ್ಗ: “ಯಾರೂ ಇಂತಹದೇ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿರುವುದಿಲ್ಲ. ಭಗವದ್ಗೀತೆ, ಕುರಾನ್, ಬೈಬಲ್‌ಗಳಂತೆ ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವೇ ನಮಗೆ ಮುಖ್ಯ” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ರಾಜಕೀಯ ಮಾಡುವುದಕ್ಕಿಂತ ಸಂವಿಧಾನದ ಮೌಲ್ಯಗಳನ್ನು ಗೌರವಿಸುವುದು ಮುಖ್ಯ. ಸಮಾಜದಲ್ಲಿ ಎಲ್ಲರಿಗೂ ಸಮಾನ ಹಕ್ಕು ಮತ್ತು ಗೌರವ ಸಿಗಬೇಕು ಎಂಬುದೇ ಸಂವಿಧಾನದ ಆಶಯ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಿಂದೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ಆಗ ಅವರ ಅಕ್ಕಪಕ್ಕ ಇದ್ದವರೇ ಇಂದು ಕೇಂದ್ರ ರಾಜಕೀಯದಲ್ಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೆಪಿಎಸ್‌ಸಿ ಕಾರ್ಯದರ್ಶಿ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಂಧನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ನೇಮಕಾತಿ ಪ್ರಕ್ರಿಯೆಯಲ್ಲಿರುವ ಲೋಪಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಯಾವುದೇ ಅರ್ಹ ಅಭ್ಯರ್ಥಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಪಾದಯಾತ್ರೆ ಕುರಿತು ವ್ಯಂಗ್ಯವಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗಿರುವುದರಿಂದ ಬಿಜೆಪಿಯವರಿಗೆ ವಿಷಯವೇ ಇಲ್ಲದಂತಾಗಿದೆ. ಅವರು ವಾಕಿಂಗ್ ಮಾಡುವ ಮೂಲಕ ತಮ್ಮ ಆರೋಗ್ಯ ಸುಧಾರಿಸಿಕೊಳ್ಳಲಿ ಎಂದು ಹೇಳಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650