Hombuja

ಹೊಂಬುಜ ಕ್ಷೇತ್ರದಲ್ಲಿ 108 ಕಲಶಗಳ ಮಹಾಭಿಷೇಕ – ಸಂಘಪೂಜೆ | ಜೀವನ ಪಾವನವಾಗಲು ಧರ್ಮ ಪರಿಪಾಲನೆ ಅಗತ್ಯ ; ಶ್ರೀಗಳು

ಹೊಂಬುಜ ; ತ್ರಿಕೂಟ ಜಿನಾಲಯದ ಶ್ರೀ 1008 ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕವನ್ನು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆಗಮೋಕ್ತ ಶಾಸ್ತ್ರದನ್ವಯ ನೆರವೇರಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಕಂಬದಹಳ್ಳಿ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಹಾಗೂ ಕೊಲ್ಹಾಪುರ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಭಕ್ತವೃಂದದವರು ಮಹಾಭಿಷೇಕ ಧಾರ್ಮಿಕ ವಿಧಾನದಲ್ಲಿ ಪಾಲ್ಗೊಂಡರು. ಪ್ರಾತಃಕಾಲ ಕುಮದ್ವತಿ ತೀರ್ಥದಿಂದ ಅಗ್ರೋದಕ ತರಲಾಯಿತು.

“ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯ ಮಹಾಭಿಷೇಕವು ಜೈನ ಧರ್ಮದ ಆಚರಣೆಯಾಗಿದೆ. ಜೀವನದಲ್ಲಿ ಕಷ್ಟಕಾರ್ಪಣ್ಯಗಳು ಸಹಜ. ಆದರೆ ಜೀವನ ಪಾವನವಾಗಲು ಧಮಪರಿಪಾಲನೆಯಿಂದ ವಿಘ್ನಗಳು ಕ್ಷಯಿಸುತ್ತವೆ” ಎಂದು ಪೂಜ್ಯ ಸ್ವಸ್ತಿಶ್ರೀಗಳವರು ಮಂಗಲ ಪ್ರವಚನದಲ್ಲಿ ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಧಿನಾಯಕ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಯಕ್ಷಿ ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಾನಗಳು ನೆರವೇರಿದವು.

ಬೆಂಗಳೂರಿನ ರೂಪಲ್ ಜೈನ್, ಶ್ರೀ ರಜನೀಶ ಜೈನ್ ಸೇವಾಕರ್ತರಾಗಿ ಉಪಸ್ಥಿತರಿದ್ದು, ಶ್ರೀಗಳವರು ಆಶೀರ್ವದಿಸಿದರು. ಊರ ಪರವೂರ ಭಕ್ತರು ಶ್ರೀಕ್ಷೇತ್ರದ ಜಿನಮಂದಿರಗಳ ದರ್ಶನ ಮಾಡಿ ಧನ್ಯರಾದರು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪ್ರದರ್ಶನವನ್ನು ವೀಕ್ಷಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!