RIPPONPETE ; ಪ್ರತಿಯೊಬ್ಬ ನಾಗರೀಕರು ತಮ್ಮ ಮನೆ ಅಂಗಡಿ ಇತರ ಕಡೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಮೂಲ ಕರ್ತವ್ಯವಾಗಿದೆ ಎಂದು ಪ್ರಥಮದರ್ಜೆ ಕಾಲೇಜ್ ಪ್ರಾಚಾರ್ಯ ಡಾ.ಹೆಚ್.ಎಸ್.ವಿರೂಪಾಕ್ಷಪ್ಪ ಹೇಳಿದರು.
ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ರಾಷ್ಟ್ರಿಯ ಸೇವಾ ಯೋಜನೆ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಆಯೋಜಿಸಲಾದ ನಮ್ಮ ಭಾರತ ಉಪಕ್ರಮದ ಸ್ವಚ್ಚತೆಯೇ ಸೇವೆ ಅಭಿಯಾನದ ಅಡಿಯಲ್ಲಿ ಸ್ವಚ್ಚತೆ ಕುರಿತು ಜಾಗ್ರತಾ ಜಾಥಾ ಮತ್ತು ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವ ಅಭಿಯಾನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಪ್ಲಾಸ್ಟಿಕ್ ಹೆಚ್ಚು ಬಳಕೆಯಿಂದಾಗಿ ಪರಿಸರ ನಾಶವಾಗುವುದು. ಆದಷ್ಟು ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಕಡಿತಗೊಳಿಸಿ ಬಟ್ಟೆ ಬ್ಯಾಗ್ ಬಳಕೆಗೆ ಉತ್ತೇಜಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ಸಿಡಿಸಿ ಉಪಾಧ್ಯಕ್ಷ ಹಾಲಸ್ವಾಮಿಗೌಡ, ಗ್ರಾಮ ಪಂಚಾಯಿತ್ ಸದಸ್ಯ ಮಧುಸೂದನ್, ಮಂಜುಳಾ ಕೇತಾರ್ಜಿರಾವ್, ಪಿಡಿಓ ಮಧುಸೂದನ್, ಎನ್.ಎಸ್.ಎಸ್.ಅಧಿಕಾರಿ ದೇವರಾಜ್, ಕಾಲೇಜ್ ಅಧ್ಯಾಪಕ ವೃಂದದವರು ಹಾಜರಿದ್ದರು.