ಹೊಸನಗರ ; ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ಸರ್ಕಾರಿ ಸವಲತ್ತುಗಳನ್ನು ನೀಡುತ್ತಾ ಬರುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಉಪಯೋಗಿಸುವುದರ ಜೊತೆಗೆ ಆ ವಸ್ತುವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಚಂದ್ರಕಲಾ ನಾಗರಾಜ್ ತಿಳಿಸಿದರು.
ಇಲ್ಲಿನ ಪಟ್ಟಣ ಪಂಚಾಯತಿ ವತಿಯಿಂದ ಹೊಸನಗರದ ಪದವಿ ಪೂರ್ವ ಕಾಲೇಜ್ ಮಹಿಳಾ ಶೌಚಾಲಯಕ್ಕೆ ಸುಮಾರು 28 ಸಾವಿರ ರೂಪಾಯಿ ವೆಚ್ಚದಲ್ಲಿ ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಯಂತ್ರವನ್ನು ನೀಡಿದ್ದು ಇದನ್ನು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿಯ ಎಲ್ಲ ಮಹಿಳಾ ಸದಸ್ಯರುಗಳು ಹಾಗೂ ಪಟ್ಟಣ ಪಂಚಾಯತಿಯ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ಶೃತಿ, ಕೃಷ್ಣವೇಣಿ, ಈ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ಸುರೇಶ್, ಕಾಲೇಜಿನ ಎಲ್ಲ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಅಭಿನಂದನೆ :
ಹೊಸನಗರದ ಪಟ್ಟಣ ಪಂಚಾಯತಿ ವತಿಯಿಂದ ಸುಮಾರು 28 ಸಾವಿರ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮಹಿಳಾ ಶೌಚಾಲಯಕ್ಕೆ ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಯಂತ್ರವನ್ನು ನೀಡಿದ್ದು ನೀಡಲು ಸಹಕರಿಸಿರುವ ಪಟ್ಟಣ ಪಂಚಾಯತಿಯ ಆಡಳಿತ ಮಂಡಳಿಗೆ ಹಾಗೂ ನೌಕರ ವರ್ಗಕ್ಕೆ ಪ್ರಾಂಶುಪಾಲ ಸ್ವಾಮಿರಾವ್ ಹಾಗೂ ಶಾಲಾ ಅಭಿವೃದ್ಧಿ ಸಮತಿಯ ಉಪಾಧ್ಯಕ್ಷ ಎಂ.ಪಿ. ಸುರೇಶ್ ಅಭಿನಂದಿಸಿದ್ದಾರೆ.