ಹೊಸನಗರ ; ತಾಲ್ಲೂಕಿನಲ್ಲಿರುವ 5 ವರ್ಷದೊಳಗಿರುವ ಎಲ್ಲ ಮಕ್ಕಳಿಗೂ ಡಿಸೆಂಬರ್ 21ರ ಭಾನುವಾರ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಹಾಕಿಸಬೇಕೆಂದು ಹೊಸನಗರ ತಹಸೀಲ್ದಾರ್ ಭರತ್ರಾಜ್ ಮಕ್ಕಳ ಪೋಷಕರಿಗೆ ಕರೆ ನೀಡಿದರು.
ಇಲ್ಲಿನ ತಾಲ್ಲೂಕು ಕಛೇರಿಯ ಆವರಣದಲ್ಲಿ ಪಲ್ಸ್ ಪೋಲಿಯೋ ಪೂರ್ವಭಾವಿ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ನೂರಾರು ಕಾಯಿಲೆಗಳು ಬರುತ್ತಿದ್ದು ಇವುಗಳ ನಿಯಂತ್ರಣ ಹಾಗೂ ದೇಶದಲ್ಲಿ ಪೋಲೀಯೋ ಮುಕ್ತ ಭಾರತ ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇದರ ಉಪಯೋಗವನ್ನು ಎಲ್ಲ ಮಕ್ಕಳ ಪೋಷಕರು ಉಪಯೋಗಿಸಿಕೊಂಡು ನಿಮಗೆ ಸಮೀಪವಿರುವ ಸ್ಥಳಗಳಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸಿಕೊಳ್ಳಬೇಕೆಂದು ಕರೆ ನಿಡಿದರು.
ಈ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುರೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹರೀಶ್, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಾದ ಪವನ್ ಕುಮಾರ್, ಸುಧೀಂದ್ರ ಕುಮಾರ್, ಆರೋಗ್ಯ ಇಲಾಖೆಯ ಕರಿಬಸಮ್ಮ, ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವಿನಯ್ ಹೆಗಡೆ ಕರ್ಕಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇನ್ನೂ ಮುಂತಾದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





