Ripponpete

ಭೀಮಣ್ಣ ಖಂಡ್ರೆ ಅಗಲಿಕೆಗೆ ಮಳಲಿ ಶ್ರೀಗಳ ಸಂತಾಪ

ರಿಪ್ಪನ್‌ಪೇಟೆ ; ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಅಗಲಿಕೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಮಳಲಿ ಸಂಸ್ಥಾನಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಮ್ಮ ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಭೀಮಣ್ಣ ಖಂಡ್ರೆ ಅವರು ಸಾರಿಗೆ ಸಚಿವ ಹುದ್ದೆ ಸೇರಿದಂತೆ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದವರಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸಮಾಜವನ್ನು ಒಗ್ಗೂಡಿಸುವ ಮಹತ್ಕಾರ್ಯವನ್ನು ಮಾಡಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ಅನುಗ್ರಹಿಸಲಿ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಅನುಗ್ರಹಿಸಲಿ ಎಂದು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]