RIPPONPETE ; ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಗೋಪಾಲಣ್ಣ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇವರು ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು, ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಸ್ವಗ್ರಾಮದ ತಮ್ಮ ಜಮೀನಿನಲ್ಲಿ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

