RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆಯುತ್ತಿರುವ ‘ಇಂದ್ರಧ್ವಜ ಮಹಾಮಂಡಲ ವಿಧಾನ’ದ ಪೂಜಾ ಬಳಿಕ ಮಲೆನಾಡು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ-2024, 8ನೇ ಆವೃತ್ತಿ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್‌ರವರು ಬಿಡುಗಡೆಗೊಳಿಸಿದರು.
ಹೊಂಬುಜ ಜೈನ ಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು, ಕನಕಗಿರಿ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ, ಸೋಂದಾ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಅಕಲಂಕಕೇಸರಿ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮೀಜಿ ಉಪಸ್ಥಿತಿಯಲ್ಲಿ ಬಿಡುಗಡೆಗೊಂಡಿದ್ದು, ಜಿನಭಜನೆ ಸ್ಪರ್ಧೆಯ ಅತ್ಯಧಿಕ ತಂಡದವರು ಭಾಗವಹಿಸುವಂತಾಗಲಿ ಎಂದು ಹರಸಿದರು.

ಡಿಸೆಂಬರ್ 8, 2024 ಭಾನುವಾರದಂದು ಹೊಂಬುಜ ಶ್ರೀ ಪದ್ಮಾವತಿ ಜೈನ ಸಮುದಾಯ ಭವನದಲ್ಲಿ ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ರಾಷ್ಟ್ರೀಯ ಜೈನ ಮಿಲನ್ ವಲಯ-8, ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಯಶೋಧರ ಹೆಗ್ಡೆಯವರು, ಜಿನಭಜನಾ ಕೇಂದ್ರ ಸಮಿತಿ ಸಂಯೋಜಕ ಪಿ. ಅಜಿತಕುಮಾರ್ ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.