ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ !

Written by malnadtimes.com

Published on:

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28) ಬಂಧಿತ ಆರೋಪಿ. ನಗರ ಠಾಣೆ ಪಿಎಸ್ಐ ಶಿವಾನಂದ್ ವೈ.ಕೆ ಹಾಗೂ ಸಿಬ್ಬಂದಿಗಳಾದ ಎಎಸ್ಐ ಕುಮಾ‌ರ್, ವಿಶ್ವನಾಥ್, ಪ್ರವೀಣ್, ಚಾಲಕ ಶಶಿಧರ್ ಗಸ್ತು ತಿರುಗುತ್ತಿದ್ದಾಗ ನಿಟ್ಟೂರು ಬಸ್ ನಿಲ್ದಾಣದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತನೆ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಈತನನ್ನು ವಶಕ್ಕೆ ಪಡೆದಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಈತನ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment