SAGARA ; ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿ. ಈತ ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.